ಮೈಸೂರು

ಕನ್ನಡ ಸಾಹಿತ್ಯ ಪರಿಷತ್ತಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ: ವಿಚಾರ ಸಂಕಿರಣ

ಮೈಸೂರಿನ ಅಗ್ರಹಾರದಲ್ಲಿರುವ ನಟರಾಜ ಪ್ರಥಮದರ್ಜೆ ಕಾಲೇಜಿನಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ವತಿಯಿಂದ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ “ಕನ್ನಡ ಸಾಹಿತ್ಯ ಪರಿಷತ್ತಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ” ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ಹೊಸಮಠದ ಚಿದಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಐ.ಇ.ಐ. ಕೊಲ್ಕತ್ತಾ ಉಪಾಧ್ಯಕ್ಷ ಸತೀಶ್ ಅವರು ಉದ್ಘಾಟನೆಯನ್ನು ನೆರವೇರಿಸಲಿದ್ದು, ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎನ್.ಜಿ. ಲೋಕೇಶ್ ಅಧ್ಯಕ್ಷತೆ  ವಹಿಸಲಿದ್ದಾರೆ. ಸಮಾಜಸೇವಕ ಕೆ. ರಘುರಾಂ, ಹಿರಿಯ ವಿದ್ವಾಂಸ ಮಳಲಿ ವಸಂತಕುಮಾರ್ ಭಾಷಣಕಾರರಾಗಿ ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ವೈ.ಡಿ. ರಾಜಣ್ಣ, ಮಾಜಿ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಅಖಿಲ ಕರ್ನಾಟಕ ಪರಿಸರ ಜಾಗೃತಿ ವೇದಿಕೆಯ ಟಿ. ಮಹದೇವಸ್ವಾಮಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಕಸಾಪ ಮಹಿಳಾ ಘಟಕ ಉಪಾಧ್ಯಕ್ಷೆ ಸುಮನಾ ರಘುನಂದನ್, ಕಾರ್ಯದರ್ಶಿ ನಾಗರತ್ನ, ಸಂಘಟನಾ ಕಾರ್ಯದರ್ಶಿಗಳಾದ ರಾಜರಾಜೇಶ್ವರಿ, ಕೌಸಲ್ಯಾ ಭಾಗವಹಿಸಲಿದ್ದಾರೆ.

Leave a Reply

comments

Related Articles

error: