ಮೈಸೂರು

ರಾಜಕೀಯ ವೈಷಮ್ಯದ ಹಿನ್ನೆಲೆ : ಬೆಳೆದು ನಿಂತಿದ್ದ ಕಬ್ಬಿನ ಫಸಲಿಗೆ ಬೆಂಕಿ

ಮೈಸೂರು,ಡಿ.13;- ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೆಳೆದು ನಿಂತಿದ್ದ ಕಬ್ಬಿನ ಫಸಲಿಗೆ ಬೆಂಕಿ ಹಚ್ಚಿದ ಘಟನೆ ಮೈಸೂರು ಜಿಲ್ಲಾ ನಂಜನಗೂಡಿನ ಹರಿಹರಪುರದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್ ಸದಸ್ಯೆ ಮಹದೇವಮ್ಮನವರಿಗೆ ಸೇರಿದ ಸುಮಾರು ಎರಡು ಎಕರೆಯಲ್ಲಿ ಬೆಳೆದಿದ್ದ ಕಬ್ಬಿನ ಫಸಲಿಗೆ ದುಷ್ಕರ್ಮಿಗಳು ಬೆಂಕಿಹಚ್ಚಿದ್ದಾರೆ. ಕಟಾವಿಗೆ ಬಂದಿದ್ದ ಕಬ್ಬಿನ ಫಸಲಿಗೆ ಬೆಂಕಿ ಹಚ್ಚಿದ್ದು, ಗ್ರಾಮಪಂಚಾಯತ್  ಅಧ್ಯಕ್ಷಗಾದಿ ವಿಚಾರದಲ್ಲಿ ರಾಜಕೀಯ ವೈಷಮ್ಯದಿಂದ ಈ ರೀತಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: