ಮೈಸೂರು

ಸುಪ್ರೀಂಕೋರ್ಟ್ ತೀರ್ಮಾನ ವಿರೋಧಿಸಿ ಪ್ರತಿಭಟನೆ

ತಮಿಳುನಾಡಿಗೆ ಪ್ರತಿದಿನ 2000 ಕ್ಯೂಸೆಕ್ಸ್ ನೀರು ಬಿಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಮಾನವನ್ನು ವಿರೋಧಿಸಿ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಜಿಲ್ಲಾ ನ್ಯಾಯಾಲಯದ ಎದುರು ಪ್ರತಿಭಟನಾಕಾರರು ಶನಿವಾರ ನಡೆದ ಪ್ರತಿಭಟನೆಯಲ್ಲಿ ನೀರು ಇಲ್ಲದ ಖಾಲಿ ಬಕೆಟ್ ಇರಿಸಿ ಹಸು ಅದನ್ನು ಕುಡಿಯಲು ಪ್ರಯತ್ನಿಸುವಂತೆ ಮಾಡುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಪ್ರತಿಭಟನಾಕಾರರು, ಕಳೆದ 25 ವರ್ಷಗಳಲ್ಲಿ ಹೆಚ್ಚು ಬರಗಾಲವನ್ನು ರಾಜ್ಯ  ಎದುರಿಸುತ್ತಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಕಳೆದ ಅಕ್ಟೋಬರ್ 18 ರಿಂದ ಇಲ್ಲಿಯವರೆಗೂ ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುತ್ತಲೇ ಬಂದಿದೆ. ರಾಜ್ಯದ ಎಲ್ಲ ಜಲಾಶಯಗಳಲ್ಲೂ ನೀರು ತಳಮಟ್ಟಕ್ಕೆ ಕುಸಿದಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ. ಇನ್ನಾದರೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ ರಾಜ್ಯದ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಗುರುಶಂಕರ್, ಶ್ರೀನಿವಾಸ್ ರಾಜ್ ಕುಮಾರ್, ಬಸವರಾಜು, ಪಿ.ವಿಜಯಕುಮಾರ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: