ಕರ್ನಾಟಕಪ್ರಮುಖ ಸುದ್ದಿ

ಬಾಲ್ಯ ವಿವಾಹ ನಿಷೇಧ ಕಾಯ್ದೆ: ಡಿ.16ರಂದು ಒಂದು ದಿನದ ಕಾರ್ಯಾಗಾರ

ಮಂಡ್ಯ (ಡಿ.14): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಂಡ್ಯ ಇವರುಗಳ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006, ಬಾಲ್ಯವಿವಾಹ ನಿಷೇಧ ನಿಯಮಾವಳಿ-2014, ಬಾಲ್ಯವಿವಾಹ ನಿಷೇಧ ಕಾಯ್ದೆ-2016 ರ ಅನುಷ್ಠಾನ ಕುರಿತು ಜಿಲ್ಲೆಯ ನ್ಯಾಯಾಧೀಶರುಗಳಿಗೆ, ಸರ್ಕಾರಿ ಅಭಿಯೋಜಕರಿಗೆ ಮತ್ತು ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಡಿ.16 ರಂದು ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಕಾನೂರು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಜಿ.ವಿಜಯಕುಮಾರಿ ಅವರು ನಡೆಸಿಕೊಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ವಹಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮನ್ಸೂರ್ ಅಹಮದ್ ಜಮಾನ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಜಿ.ದಿನೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಯಾಲಕ್ಕಿಗೌಡ ಅವರು ಭಾಗವಹಿಸುವರು.

ಮೊದಲನೇ ಅಧಿವೇಶನ ಬೆಳಿಗ್ಗೆ 10.30 ರಿಂದ 12.30 ಗಂಟೆಯವರೆಗೆ ಬಾಲ್ಯವಿವಾಹ ನಿಷೇಧ ಕಾಯ್ದೆ 2006, ಬಾಲ್ಯವಿವಾಹ ನಿಷೇಧ ನಿಯಮಾವಳಿ-2014, ಬಾಲ್ಯವಿವಾಹ ನಿಷೇಧ ಕಾಯ್ದೆ 2016 ಕುರಿತು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ರಾಜ್ಯ ನಿರ್ವಾಹಕರಾದ ವಾಸುದೇವಶರ್ಮಾ ಅವರಿಂದ ಉಪನ್ಯಾಸ.

ಎರಡನೇ ಅಧಿವೇಶನ ಮಧ್ಯಾಹ್ನ 12.30 ರಿಂದ 1.30 ಗಂಟೆಯವರೆಗೆ ಬಾಲ್ಯವಿವಾಹ ನಿಷೇಧ ವಿಷಯದಲ್ಲಿ ನ್ಯಾಯಾಂಗದ ಪಾತ್ರ ಪ್ರಕರಣಗಳ ಅಧ್ಯಯನ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮನ್ಸೂರ್ ಅಹಮದ್ ಜಮಾನ್ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. (ಎನ್.ಬಿ)

Leave a Reply

comments

Related Articles

error: