ಮೈಸೂರು

ಬೆಂಗಳೂರು ಯುವತಿ ಮೇಲಿನ ದೌರ್ಜನ್ಯ ಪ್ರಕರಣ : ಮೊಂಬತ್ತಿ ಬೆಳಗಿ ಪ್ರತಿಭಟನೆ

ಮೈಸೂರು ಜಿಲ್ಲಾ ಮಹಿಳಾ ಒಕ್ಕೂಟ ಮತ್ತು ಮಕ್ಕಳ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಯುವತಿಯ ಮೇಲೆ ನಡೆದ ದೌರ್ಜ್ಯನದ ವಿರುದ್ಧ ಪ್ರತಿಭಟನೆ ನಡೆಯಿತು.

ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಶನಿವಾರ ಸಂಜೆ ಮೊಂಬತ್ತಿ ಬೆಳಗಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಾತನಾಡಿ, ರಾಜ್ಯ ಸರ್ಕಾರ ದುರಾಡಳಿತ ನಡೆಸುತ್ತಿದೆ. ಯುವತಿಯರ ಮೇಲಿ ದೌರ್ಜನ್ಯ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಯುವತಿಯರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಪೊಲೀಸ್ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳು ಕೇಳಿ ಬಂತು. 150ಕ್ಕೂ ಅಧಿಕ ಮಹಿಳೆಯರು, ಯುವತಿಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: