ದೇಶ

ಎನ್ ಕೌಂಟರ್: 3 ಉಗ್ರರ ಬಲಿ, ಓರ್ವ ಯೋಧ ಹುತಾತ್ಮ: 6 ಮಂದಿ ನಾಗರೀಕರ ಸಾವು

ಜಮ್ಮು-ಕಾಶ್ಮೀರ,ಡಿ.15-ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೆ, ಆರು ಮಂದಿ ಸಾರ್ವಜನಿಕರು ಸಾವನ್ನಪ್ಪಿದ್ದಾರೆ.

ಭಾರತೀಯ ಸೇನೆ ಹಾಗೂ ಸಿಆರ್ ಪಿಎಫ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಮೂವರು ಉಗ್ರರು ಬಲಿಯಾಗಿದ್ದಾರೆ.

ಎನ್ ಕೌಂಟರ್ ಬಳಿಕ ನಡೆದ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಶಿರ್ನೂ ಗ್ರಾಮದಲ್ಲಿ ಯುವಕರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಮಂದಿ ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಘರ್ಷಣೆಯಲ್ಲಿ ಹಲವಾರು ಯುವಕರು ಪೆಲ್ಲೆಟ್ ಗನ್ ಶಾಟ್ ನಿಂದ ಗಾಯಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಮೂವರು ಉಗ್ರರಲ್ಲಿ ಓರ್ವ ಭಾರತೀಯ ಸೇನಾ ಪಡೆಯಲ್ಲಿ ಯೋಧನಾಗಿ ಕಾರ್ಯನಿರ್ವಹಿಸಿದ್ದ. ಕಳೆದ ವರ್ಷ ಎಕೆ 47 ರೈಫಲ್ ನೊಂದಿಗೆ ಆರ್ಮಿ ಕ್ಯಾಂಪ್ ನಿಂದ ನಾಪತ್ತೆಯಾಗಿ ಉಗ್ರಗಾಮಿ ಸಂಘಟನೆ ಸೇರಿಕೊಂಡಿದ್ದ. ಪುಲ್ವಾಮಾದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. (ಎಂ.ಎನ್)

 

Leave a Reply

comments

Related Articles

error: