ದೇಶಪ್ರಮುಖ ಸುದ್ದಿ

ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ: ಅನಿವಾಸಿ ಭಾರತೀಯರೊಂದಿಗೆ ಸಂವಾದ ಕಾರ್ಯಕ್ರಮ

ಬೆಂಗಳೂರಿನಲ್ಲಿ ನಡೆಯುತ್ತಿರುವ 14ನೇ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್, ಕರ್ನಾಟಕ ರಾಜ್ಯಪಾಲ ವಜೂಭಾಯ್ ರೂಡಾಭಾಯ್ ವಾಲಾ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತರ ಸಚಿವರೊಂದಿಗೆ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದು ಮೋದಿ ಅವರನ್ನು ಸ್ವಾಗತಿಸಿದರು.

ಸುರಿನಾಮ್ ಉಪಾಧ್ಯಕ್ಷ ಮೈಕೆಲ್ ಅಶ್ವಿನ್ ಅಧಿನ್, ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ವಿಜಯ್ ಗೋಯಲ್, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ.ಸಿಂಗ್ ಮತ್ತು ಕರ್ನಾಟಕ ರಾಜ್ಯ ಸಚಿವರಾದ ಆರ್.ವಿ.ದೇಶಪಾಂಡೆ, ಪ್ರಿಯಾಂಕ್ ಖರ್ಗೆ ಅವರು ಯುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರದಂದು ಪ್ರವಾಸಿ ಭಾರತೀಯ ಸಮ್ಮಾನ್ ಪ್ರದಾನ ಮಾಡಲಿದ್ದಾರೆ.

ಭಾನುವಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಅನಿವಾಸಿ ಭಾರತೀಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.

ಜನವರಿ 9 ರಂದು ಮಹಾತ್ಮ ಗಾಂಧೀಜಿ ಅವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ ದಿನವಾಗಿದ್ದು, ಆ ದಿನದ ನೆನಪಿಗಾಗಿ ಮುಖ್ಯವಾಗಿ ಭಾರತದ ಅಭಿವೃದ್ಧಿಗೆ ಸಾಗರೋತ್ತರ ಭಾರತೀಯ ಸಮುದಾಯದ ಕೊಡುಗೆ ಗುರುತಿಸಲು 2003ರಿಂದ ಪ್ರತಿ ವರ್ಷ ಪ್ರವಾಸಿ ಭಾರತಿಯ ದಿವಸ್‌ ಆಚರಣೆಯನ್ನು ಮಾಡಲಾಗುತ್ತದೆ.

Leave a Reply

comments

Related Articles

error: