ದೇಶಪ್ರಮುಖ ಸುದ್ದಿ

ಸಂಚಾರ ನಿಯಮ ಉಲ್ಲಂಘನೆ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ದಂಡ

ದೇಶ(ಮುಂಬೈ)ಡಿ.16:-  ಸಂಚಾರ ನಿಯಮ ಉಲ್ಲಂಘನೆ ಮಾಡಿದಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಮುಂಬೈ ಪೊಲೀಸರು 13,000 ರೂ.ದಂಡ ವಿಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮಹಾನಗರ ಮುಂಬೈನ ಪ್ರಮುಖ ರಸ್ತೆಗಳಲ್ಲಿ ನಿಯಮ ಮೀರಿ ಅತಿ ವೇಗದಲ್ಲಿ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಈ ದಂಡ ವಿಧಿಸಿದ್ದಾರೆ ಎನ್ನಲಾಗಿದೆ.

2018ರ ಜ.12 ರಿಂದ 2018ರ ಆ. 12ರವರೆಗಿನ ಅವಧಿಯಲ್ಲಿ ಮುಖ್ಯಮಂತ್ರಿ ಫಡ್ನವೀಸ್ ಅವರ ಕಾರು ಮುಂಬೈನಲ್ಲಿ 13 ಬಾರಿ ಪ್ರಯಾಣ ಮಾಡಿದೆ. ಈ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಹೀಗಾಗಿ ಪ್ರತಿ ನಿಯಮ ಉಲ್ಲಂಘನೆಗೆ 1 ಸಾವಿರ ರೂ. ಅಂತೆ ಒಟ್ಟು 13 ಸಾವಿರ ರೂ. ದಂಡ ವಿಧಿಸಲಾಗಿದೆ.  ಅಲ್ಲದೆ, ಮುಂಬೈ ಪೊಲೀಸರು ಅವರ ಕಾರಿನ ಚಲನ್ ಕೂಡ ರದ್ದು ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: