
ಪ್ರಮುಖ ಸುದ್ದಿ
ಕರುಣಾನಿಧಿ ಪ್ರತಿಮೆ ಅನಾವರಣಗೊಳಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ
ದೇಶ(ಚೆನ್ನೈ)ಡಿ.17 :- ತಮಿಳುನಾಡಿನ ದ್ರಾವಿಡ್ ಚಳವಳಿಯ ಪ್ರಮುಖ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪ್ರತಿಮೆಯನ್ನು ರವಿವಾರ ಚೆನ್ನೈಯಲ್ಲಿರುವ ಡಿಎಂಕೆ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು.
ಈ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕರುಣಾನಿಧಿಯವರ ಪುತ್ರ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತಮಿಳು ನಟ ಹಾಗೂ ರಾಜಕಾರಣಿ ರಜಿನಿಕಾಂತ್, ಮಾಜಿ ಕೇಂದ್ರ ಸಚಿವ ಶತ್ರುಘ್ನ ಸಿನ್ಹ ಮುಂತಾದವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)