ಕರ್ನಾಟಕ

ವಿದೇಶಿ ಬಂಡವಾಳ ಸೆಳೆಯುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ: ಸಿಎಂ

ಬೆಂಗಳೂರು: ಬಂಡವಾಳದ ಆಕರ್ಷಣೆಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದ್ದು, ಹೂಡಿಕೆಗೆ ಉತ್ತಮ ವಾತಾವರಣವಿದೆ. ವಿದೇಶಿಗರು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ್ದಾರೆ. ದೇಶದ ಆರ್ಥಿಕ ವ್ಯವಸ್ಥೆಗೆ ಉತ್ತಮ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ 14ನೇ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸಿದರು.

ವಿದೇಶಿ ಹೂಡಿಕೆಯಲ್ಲಿ ರಾಜ್ಯ ದೇಶದಲ್ಲಿಯೇ ನಾಲ್ಕನೆ ಸ್ಥಾನ ಪಡೆದುಕೊಂಡಿದ್ದು, ಎನ್.ಆರ್.ಐ ನೀತಿಯನ್ನು ಕೂಡ ಪ್ರಕಟಿಸಿದ್ದೇವೆ. ಎನ್.ಆರ್.ಐ ಗಳನ್ನು ಸೆಳೆಯಲು ಇದು ಸಹಕಾರಿಯಾಗಲಿದೆ. ವಿದೇಶಿ ಬಂಡವಾಳ ಸೆಳೆಯುವಲ್ಲಿ ಕರ್ನಾಟಕ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ ಎಂದರು.

Leave a Reply

comments

Related Articles

error: