ಸುದ್ದಿ ಸಂಕ್ಷಿಪ್ತ

ಡಿ.20 ರಂದು ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಯ ದಶಮಾನೋತ್ಸವ ಸಂಭ್ರಮ

ಮೈಸೂರು,ಡಿ.19-ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಯ ದಶಮಾನೋತ್ಸವ ಸಂಭ್ರಮ, ಶಾಲಾ-ಕಾಲೇಜು ವಾರ್ಷಿಕೋತ್ಸವ, ಬಹುಮಾನ ವಿತರಣೆ ಮತ್ತು ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಿ.20 ರಂದು ಬೆಳಿಗ್ಗೆ 9.30ಕ್ಕೆ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಡಾ.ಧರಣಿದೇವಿ ಮಾಲಗತ್ತಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ ಆಗಮಿಸಲಿದ್ದಾರೆ. ಮಹಾರಾಜ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಎಸ್.ಮುರಳಿ ಅಧ್ಯಕ್ಷತೆವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಶಾಲಾ ಸಾಂಸ್ಕೃತಿಕ ಕಾರ್ಯಕ್ರಮವಿದ್ದು, ಸಂಗೀತ-ನೃತ್ಯ-ನಾಟಕ ವಿಮರ್ಶಕ ಡಾ.ರಮಾ ವಿ.ಬೆಣ್ಣೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಿಶುವಿಹಾರ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: