ಮೈಸೂರು

ಲಯನ್ಸ್ ಜನಸಾಮಾನ್ಯರಿಗೆ ಹತ್ತಿರವಾಗಲಿ : ಸಚಿವ ತನ್ವೀರ್ ಸೇಠ್

ಲಯನ್ಸ್ ಸಂಸ್ಥೆ ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿರವಾಗಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.

ಮೈಸೂರಿನ ಕೃಷ್ಣಧಾಮದಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಪ್ರಾಂತೀಯ ಉತ್ಸವದಲ್ಲಿ ಪಾಲ್ಗೊಂಡು ತನ್ವೀರ್ ಸೇಠ್ ಮಾತನಾಡಿದರು. ಲಯನ್ಸ್ ಸಂಸ್ಥೆ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಅದರ ಸೇವೆ ಹೀಗೆ ನಿರಂತರವಾಗಿರಲಿ ಎಂದರು. ಸರ್ಕಾರಿ ಶಾಲೆಗಳಿಗೆ ಖುರ್ಚಿ,ಬಡಮಹಿಳೆಯರಿಗೆ ಹೊಲಿಗೆ ಯಂತ್ರ ಸೇರಿದಂತೆ ಹಲವು ಪರಿಕರಗಳನ್ನು ವಿತರಿಸಲಾಯಿತು. ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಪ್ರಾದೇಶಿಕ ಅಧ್ಯಕ್ಷ ಕೆ.ಎಸ್.ವೀರೂಪಾಕ್ಷ

ಲಯನ್ಸ್ ಜಿಲ್ಲಾ ಗೌರ್ನರ್ ಅನಿಲ್‍ಕುಮಾರ್ , ಕಸಾಪ ಮಾಜಿ ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: