
ಕರ್ನಾಟಕಪ್ರಮುಖ ಸುದ್ದಿ
ಕೆಪಿಎಸ್ಸಿ ನೇಮಕಾತಿ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ
ಬೆಂಗಳೂರು (ಡಿ.19): ಕರ್ನಾಟಕ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಸಂಬಂಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿಗಾಗಿ ಅಭ್ಯರ್ಥಿಗಳ ಆಯ್ಕೆ ಕಾರ್ಯವಿಧಾನ ವಿಧೇಯಕವನ್ನು ಮಂಡಿಸಲಾಗಿದೆ. ನೇಮಕಾತಿಯಲ್ಲಿ ಆಗಿರುವ ದೋಷವನ್ನು ಸರಿಪಡಿಸಲು ಇದು ಸಹಕಾರಿಯಾಗಲಿದೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಸಂಬಂಧ 1998, 1999 ಹಾಗೂ 2004ರಲ್ಲಿ ಆಗಿರುವ ಲೋಪ ಸರಿಪಡಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ಸಿವಿಲ್ ಸೇವೆಗಳಲ್ಲಿ ಯಾವುದೇ ಹುದ್ದೆ ನೇಮಕಾತಿಗಾಗಿ ಆಯ್ಕೆಯ ಕಾರ್ಯ ವಿಧಾನ ಅನುಸೂಚಿತ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧಡಿಸಲು ಸಹಕಾರಿಯಾಗಲಿದೆ. (ಎನ್.ಬಿ)