ಕರ್ನಾಟಕ

ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಮಂಡ್ಯ (ಡಿ.20): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 1-1-2018 ರಿಂದ 31-12-2018 ರವರೆಗೆ ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಮಾನ್ಯ ವರ್ಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ, ರಾಷ್ಟ್ರ ಮಟ್ಟದಲ್ಲಿ ಪದಕ ಗಳಿಸಿರುವ, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿರುವ ಮತ್ತು ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿರುವ ಯುವ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಅರ್ಹ ಯುವ ಕ್ರೀಡಾಪಟುಗಳು ಕ್ರೀಡಾ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ರಾಷ್ಟ್ರೀಕೃತ ಬ್ಯಾಂಕ್ ಅಕೌಂಟ್ ವಿವರದೊಂದಿಗೆ ಸ್ವಯಂ ಲಿಖಿತ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ಇವರಿಗೆ ಜನವರಿ 5 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ಇವರನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: