ಮೈಸೂರು

ಕಿಚ್ಚುಗುತ್ತಿ ಮಾರಮ್ಮ ವಿಷ ಪ್ರಸಾದ ದುರಂತ ಪ್ರಕರಣ : ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಸಾಧ್ಯತೆ

ಮೈಸೂರು,ಡಿ.20:- ಚಾಮರಾಜನಗರ ಜಿಲ್ಲೆ  ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 21ಮಂದಿ ನಿನ್ನೆಯವರೆಗೆ ಡಿಸ್ ಚಾರ್ಜ್ ಆಗಿದ್ದಾರೆ.

ಇಂದು ಸಹ ಮೈಸೂರಿನ ವಿವಿಧ ಆಸ್ಪತ್ರೆಗಳಿಂದ ಹಲವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದ್ದು, ಇಂದು ಕೆ ಆರ್ ಆಸ್ಪತ್ರೆಯಿಂದ 15 ಮಂದಿ ಡಿಸ್ ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಸುಯೋಗ್ ಆಸ್ಪತ್ರೆಯಿಂದ ಎಂಟು ಮಂದಿ ಮಕ್ಕಳು ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ. ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ಸುಮಾರು 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಆರು ಮಂದಿ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಸದ್ಯ ನಾಲ್ವರು ಇನ್ನೂ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತಿದ್ದು, ಉಳಿದವರು ಸಾಮಾನ್ಯ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲಂಬಿಯಾ ಏಷ್ಯಾ, ಕಾವೇರಿ ಸೇರಿದಂತೆ ವಿವಿಧ ಆಸ್ಪತ್ರೆಗಳಿಂದ ಗುಣಮುಖರಾದವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: