ಪ್ರಮುಖ ಸುದ್ದಿಮೈಸೂರು

ಡಿ.22ರಂದು ಎಸ್ ಜೆ ಸಿಇ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಮಾಗಮ

ಮೈಸೂರು,ಡಿ.20 : ಎಸ್ ಜೆಸಿಇ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ‘ಅಂತರಾಷ್ಟ್ರೀಯ ಹಳೆಯ ವಿದ್ಯಾರ್ಥಿಗಳ ಸಂಗಮ’ ಕಾರ್ಯಕ್ರಮವನ್ನು ಡಿ.22ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗ್ಲೋಬಲ್ ಅಲುಮಿನಿ ಮೀಟ್ ನ ಸಂಚಾಲಕ ಡಾ.ಹರೀಶ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದರು ಅವರನ್ನು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಈ ಸಮಾರಂಭ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆಯಿಂದಲೇ ಹಲವಾರು ಕಾರ್ಯಕ್ರಮಗಳು, ಸಂವಾದ, ಪರಸ್ಪರಲ್ಲಿ ವಿಷಯ ಹಂಚಿಕೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸಂಜೆ ನಡೆಯುವ ಕಾರ್ಯಕ್ರಮವನ್ನು ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಇಂದು ಮೇಘಾಲಯ ಮುಖ್ಯಮಂತ್ರಿಗಳ ಸಹಾಯಕ ಕಾರ್ಯದರ್ಶಿಯಾಗಿರುವ ಅರುಣ್ ಕುಮಾರ್ ಕೆಂಬಾವಿಯವರು ಉದ್ಘಾಟಿಸಲಿದ್ದಾರೆ. ಜೆಎಸ್ಎಸ್ ವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಸಲಹೆಗಾರ ಪ್ರೊ.ಎಂ.ಹೆಚ್.ಧನಂಜಯ ಅಧ್ಯಕ್ಷತೆ ವಹಿಸಲಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಶಿಷ್ಯವೇತನ ವಿತರಣೆಯನ್ನು ನೆರವೇರಿಸಲಾಗುವುದು, ನಂತರ ಖ್ಯಾತ ವಾಗ್ಮಿ ಪ್ರೊ.ಕೃಷ್ಣೇಗೌಡ ಅವರಿಂದ ಹಾಸ್ಯ ಸಂಜೆ, ಹಾಗೂ ಗಾಯಕಿ ಡಾ.ಶ್ರೀದೇವಿ ಕುಳೇನೂರು ಅವರಿಂದ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈಗಾಗಲೇ 200ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಂ.ಡಿ.ಹರಿನಾಥ್, ಡಾ.ಪ್ರದೀಪ್ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

 

Leave a Reply

comments

Related Articles

error: