ಮೈಸೂರು

ವಿಷಪೂರಿತ ಪ್ರಸಾದ ಸೇವನೆ : ಮೃತರ ಸಂಖ್ಯೆ 16ಕ್ಕೇರಿಕೆ

ಮೈಸೂರು,21:- ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತು ಮಾರಮ್ಮ ದೇವಾಲಯದ ಗೋಪುರ ನಿರ್ಮಾಣದ ಶಂಕುಸ್ಥಾಪನೆ ವೇಳೆ ನೀಡಲಾದ ವಿಷಪೂರಿತ ಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ.
ಈ ಹಿಂದೆ 15ಮಂದಿ ಸಾವನ್ನಪ್ಪಿದ್ದು, ಅಸ್ವಸ್ಥರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ನಾಗೇಶ್(45) ಇಂದು ಬೆಳಿಗ್ಗೆ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರಿಗೆ ಮೊದಲು ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಜೆಎಸ್ ಎಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: