ಮೈಸೂರು

ಅಂತರ್ಜಲ ರಕ್ಷಣೆಗೆ ಮಳೆ ನೀರು ಕೊಯ್ಲು ಅವಶ್ಯ : ರಮೇಶ್

ಮೈಸೂರು,ಡಿ.21 : ದಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ವತಿಯಿಂದ ಮಳೆ ನೀರು ಕೊಯ್ಲು ಹಾಗೂ ಅಂತರ್ಜಲ ಹೆಚ್ಚಳದ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಹೆಚ್.ರಮೇಶ್ ಉಪನ್ಯಾಸ ನೀಡಿ ಛಾವಣಿಯ ಮೇಲೆ ಬೀಳುವ ಮಳೆ ನೀರನ್ನು ಶೇಖರಿಸಿ ಬಳಕೆ ಮಾಡುವುದರಿಂದ ಉತ್ತಮ ಗುಣಮಟ್ಟದ್ದಾಗಿರುತ್ತದೆ. ಬಳಕೆ ಮೊದಲು ಸಂಸ್ಕರಿಸುವ ಅಗತ್ಯ ಕಂಡು ಬರುವುದಿಲ್ಲ ಎಂದು ತಿಳಿಸಿದರು.

ಪ್ರತಿಯೊಬ್ಬರು ಮಳೆ ನೀರು ಕೊಯ್ಲು ಅಳವಡಿಸಿಕೊಂಡಲ್ಲಿ ನೀರಿನ ಬವಣೆ ತಪ್ಪಿಸಬಹುದಾಗಿದ್ದು ಬೋರ್ ವೆಲ್ ಗೆ ಮಳೆ ನೀರು ಹರಿದು ಹೋಗುವ ವಿಧಾನ ಅಳವಡಿಸಿಕೊಂಡಲ್ಲಿ ಬೋರ್ ವೆಲ್ ಅಂತರ್ಜಲ ಹೆಚ್ಚಿಸಬಹುದಾಗಿದೆ ಎಂದು ವಿವರಿಸಿದರು.

ಸಂಸ್ಥೆ ಅಧ್ಯಕ್ಷ ಡಾ.ಆರ್.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಡಿ.ಕೆ.ದಿನೇಶ್ ಕುಮಾರ್ ಇದ್ದರು. (ಕೆ.ಎಂ.ಆರ್)

Leave a Reply

comments

Related Articles

error: