ಪ್ರಮುಖ ಸುದ್ದಿ

ವಾಯುವ್ಯ ರಸ್ತೆ ಸಾರಿಗೆ ನಿಗಮದ ಚೇರ್ಮನ್ ಹುದ್ದೆ ಬೇಡ : ಶಾಸಕ ಶಿವರಾಮ ಹೆಬ್ಬಾರ್

ರಾಜ್ಯ(ಬೆಂಗಳೂರು)ಡಿ.22:- ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಬೆನ್ನಲ್ಲೇ ಭಿನ್ನಮತ ಸ್ಪೋಟಗೊಂಡಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆ ತಮಗೆ ನೀಡಿರುವ ವಾಯುವ್ಯ ರಸ್ತೆ ಸಾರಿಗೆ ನಿಗಮದ ಚೇರ್ಮನ್ ಹುದ್ದೆ ಬೇಡ ಎಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ  ಕಾಂಗ್ರೆಸ್  ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಶಾಸಕ ಶಿವರಾಮ ಹೆಬ್ಬಾರ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಮಂತ್ರಿಪಟ್ಟಕ್ಕಾಗಿ ಪಟ್ಟು ಹಿಡಿದಿದ್ದರು. ಆದರೆ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕ ಶಿವರಾಮ ಹೆಬ್ಬಾರ್ ವಾಯುವ್ಯ ರಸ್ತೆ ಸಾರಿಗೆ ನಿಗಮದ ಚೇರ್ಮನ್ ಹುದ್ದೆ ತಮಗೆ ಬೇಡ  ಎಂದು ತಿಳಿಸಿದ್ದಾರೆ. ಶಿವರಾಂ ಹೆಬ್ಬಾರ್ ಬಿಜೆಪಿ ಮುಖಂಡರ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ರಾಮಲಿಂಗರೆಡ್ಡಿ ಅವರಿಗೂ ಸಚಿವ ಸ್ಥಾನ ಕೈತಪ್ಪಿದೆ. ಹೀಗಾಗಿ ರಾಮಲಿಂಗರೆಡ್ಡಿ ಅವರ ಪುತ್ರ ಸೌಮ್ಯ ರೆಡ್ಡಿ‌ ನಿಗಮ ಮಂಡಳಿ ಹುದ್ದೆ ತಿರಸ್ಕರಿಸಿದ್ದಾರೆ. ಅಲ್ಲದೆ ತಂದೆಗೆ ಸಚಿವ ಸ್ಥಾನ ನೀಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: