ಪ್ರಮುಖ ಸುದ್ದಿಮೈಸೂರು

ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲಾಗುವುದು : ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಡಿ.24:- ಬೆಳಗಾವಿಯಲ್ಲಿ ಅಧಿವೇಶನ ಇದ್ದ ಕಾರಣ ಸಭೆ ಕರೆಯಲು ಆಗಿರಲಿಲ್ಲ. ಈಗ ಎಲ್ಲಾ ಅಧಿಕಾರಿಗಳ ಸಭೆ ಕರೆಯಲಾಗಿದೆ. ಎಲ್ಲಾ ಕಡೆ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಜಲದರ್ಶಿನಿಯ ಉಸ್ತುವಾರಿ ಸಚಿವರ ಕಚೇರಿಯಲ್ಲಿಂದು ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಉಂಡವಾಡಿ ಕುಡಿಯುವ ನೀರಿನ ಯೋಜನೆ ಆಗುವವರೆಗೆ ನೀರಿನ ಸಮಸ್ಯೆ ಇದ್ದೇ ಇರುತ್ತೆ. ನೀರಿನ ‌ಸಮಸ್ಯೆ ಬಗೆ ಹರಿಸಲು ಎಂಡಿಯವರನ್ನೇ ಬರಲು ಹೇಳಿದ್ದೇನೆ. ನಾಳೆ ಬರುತ್ತಿದ್ದಾರೆ. ಕೂಡಲೇ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲಾಗುವುದು. ಈಗಾಗಲೇ ಮೈಸೂರಿನ ಕೆ.ಆರ್.ಆಸ್ಪತ್ರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ್ದೇನೆ. ಈ ವಿಷಯವನ್ನು ಸಿಎಂ ಜೊತೆ ಸಹ ಚರ್ಚೆ ಮಾಡಿದ್ದೇನೆ.ಕೆ.ಆರ್.ಆಸ್ಪತ್ರೆಯನ್ನು ಸಕಲ‌ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು. ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಉನ್ನತ ಶಿಕ್ಷ‌ಣ ಇಲಾಖೆಯಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಖಾಲಿ ಇರುವ 1200 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗಾಗಲೇ 800 ಕ್ಕೂ ಹೆಚ್ಚು ಅಭ್ಯರ್ಥಿಗಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ. ಉಳಿದ 400 ಅಭ್ಯರ್ಥಿಗಳನ್ನು ಶೀಘ್ರದಲ್ಲೆ ಭರ್ತಿ ಮಾಡಿಕೊಳ್ಳಲಾಗುವುದು. ಕೇಂದ್ರದ ಯುಜಿಸಿ‌ ನಿಯಮದ ಅನುಸಾರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಪ್ರಕ್ರಿಯೆಗೆ ಯುಜಿಸಿಯ ಆರ್ಥಿಕ ‌ನೆರವು ಸಿಕ್ಕಿದೆ. ರಾಜ್ಯ ಸರ್ಕಾರದ ನೆರವಿನೊಂದಿಗೆ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಜ್ಯದ ಉಳಿದ ವಿವಿಗಳ ಕುಲಪತಿಗಳನ್ನು ನೇಮಕ‌ ಮಾಡಲಾಗುವುದು ಎಂದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: