ಕರ್ನಾಟಕ

ಪದ್ಮಶ್ರೀ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಇನ್ನಿಲ್ಲ

ಬೆಂಗಳೂರು,ಡಿ.25-ಅನಾರೋಗ್ಯದಿಂದ ಬಳಲುತ್ತಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ (98) ಇಂದು ಕೊನೆಯುಸಿರೆಳೆದರು.

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನರಸಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೂಲತಃ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕೃಷ್ಣಾಪುರ ಗ್ರಾಮದ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15,000 ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ. ಇವರು ಗ್ರಾಮೀಣ ಪ್ರದೇಶದ ನರ್ಸ್ ಆಗಿದ್ದರು.

ನರಸಮ್ಮನವರ ಈ ಸೇವೆಯನ್ನು ಗುರುತಿಸಿ ಭಾರತ ಸರ್ಕಾರವು 2018ರಲ್ಲಿ ಪದ್ಮಶ್ರೀ ಹಾಗೂ 2013ರಲ್ಲಿ ವಯೋಶ್ರೇಷ್ಟ ಸಮ್ಮಾನ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಇವರು ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಅನ್ನು ಪಡೆದಿದ್ದಾರೆ.

2012ರಲ್ಲಿ ಕರ್ನಾಟಕ ಸರ್ಕಾರ ಡಿ.ದೇವರಾಜ ಅರಸು ಪ್ರಶಸ್ತಿ, 2014ರಲ್ಲಿ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್, 2013 ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, 2013 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ , 2013ರಲ್ಲಿ ಭಾರತ ಸರ್ಕಾರದ ವಯೋಶ್ರೇಷ್ಟ ಸಮ್ಮಾನ, 2018ರಲ್ಲಿ ದೇಶದ ಮೂರನೇ ಅತ್ಯಂತ ಶ್ರೇಷ್ಟ ನಾಗರಿಕ ಸನ್ಮಾನವಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: