ಕರ್ನಾಟಕಪ್ರಮುಖ ಸುದ್ದಿ

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ಶಾಸಕರು ಕಿತ್ತಾಡುತ್ತಿದ್ದಾರೆ: ಜಗದೀಶ್ ಶೆಟ್ಟರ್ ವ್ಯಂಗ್ಯ

ಹುಬ್ಬಳ್ಳಿ (ಡಿ.25): ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಾದ ಬಳಿಕ ಪಕ್ಷದೊಳಗೆ ಗೊಂದಲ, ಒಳಜಗಳ ಆರಂಭವಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ, ಅದರಂತೆ ಕಾಂಗ್ರೆಸ್ ಶಾಸಕರು ಒಳಜಗಳದಿಂದ ಕಿತ್ತಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಒಂದು ವಾರ ಹೋದರೆ ಇನ್ನಷ್ಟು ಬೆಳವಣಿಗೆಗಳು ಆಗಬಹುದು, ಈಗ ಕಾಂಗ್ರೆಸ್‌ನಲ್ಲಿ ಜಗಳ ಹೆಚ್ಚಾಗುತ್ತಿದೆ. ರಮೇಶ್ ಜಾರಕಿಹೊಳಿ ಎಷ್ಟು ಮಂದಿ ಶಾಸಕರಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ, ಸರ್ಕಾರ ರಚನೆ ಮಾಡುವುದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

ಕುಮಾರಸ್ವಾಮಿ ಅವರು ತಾಳ್ಮೆ ಕಾಪಾಡಿಕೊಳ್ಳಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಮೊದಲು ಕಾನೂನು ಬಾಹಿರ ಹೇಳಿಕೆ ನೀಡುವುದು ಬಿಡಬೇಕು. ನಾನು ಕುಮಾರಸ್ವಾಮಿ ಆಗಿ ಹೇಳಿಕೆ ಕೊಟ್ಟಿದ್ದೇನೆ ಎನ್ನುತ್ತಾರೆ. ಕುಮಾರಸ್ವಾಮಿ ಬೇರೆ ಸಿಎಂ ಕುಮಾರಸ್ವಾಮಿ ಬೇರೆನಾ ಎಂದು ಶೆಟ್ಟರ್ ಪ್ರಶ್ನಿಸಿದರು. (ಎನ್.ಬಿ)

Leave a Reply

comments

Related Articles

error: