ಮೈಸೂರು

ಒತ್ತಡದಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರ ಆರೋಗ್ಯ ಸುಧಾರಣೆಗೆ ಕ್ರೀಡೆ ಅತ್ಯಗತ್ಯ : ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಡಿ.26:- ಸದಾ ಒತ್ತಡದಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರ ಆರೋಗ್ಯ ಸುಧಾರಣೆಗೆ ಕ್ರೀಡೆ ಅತ್ಯಗತ್ಯ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಅವರಿಂದು ಜಿಲ್ಲಾಡಳಿತ- ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ  ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಸರ್ಕಾರಿ ನೌಕರರಿಗಾಗಿ ನೌಕರರ ಸಂಘವು ಪ್ರತಿವರ್ಷ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಸ್ವಾಗತಾರ್ಹ. ನೌಕರರ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಹೆಚ್ಚಳಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಅವರ ಕೆಲಸದಲ್ಲಿನ ಒತ್ತಡ ಕ್ರೀಡೆಯಿಂದ ಕಡಿಮೆಯಾಗಲಿದ್ದು, ದಕ್ಷತೆ ಹೆಚ್ಚಲಿದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವೂ ಲಭಿಸಲಿದೆ. ನೌಕರರಲ್ಲೂ ಕೂಡ ಉತ್ತಮ ಕ್ರೀಡಾಭಿರುಚಿಯನ್ನು ಹೊಂದಿದವರು ಇದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಉಪ ಮೇಯರ್ ಶಫೀ ಅಹಮದ್ , ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ  ಹೆಚ್.ಕೆ.ರಾಮು, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಅಚ್ಚುತಾನಂದ, ಪಾಲಿಕೆಯ ಸದಸ್ಯ ಸತೀಶ್  ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: