ಪ್ರಮುಖ ಸುದ್ದಿ

ಕೇಂದ್ರ ಸರ್ಕಾರದ ಬ್ಯಾಂಕ್ ವಿಲೀನೀಕರಣ ಧೋರಣೆ ಖಂಡಿಸಿ ಪ್ರತಿಭಟನೆ

ರಾಜ್ಯ(ಗದಗ)ಡಿ.26:- ಕೇಂದ್ರ ಸರ್ಕಾರದ ಬ್ಯಾಂಕ್ ವಿಲೀನೀಕರಣ ಧೋರಣೆ ಖಂಡಿಸಿ ಗದಗನಲ್ಲಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದ ನೌಕರರು, ಬ್ಯಾಂಕ್ ಆಫ್ ಬರೋಡಾ, ವಿಜಯಾ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ವಿಲೀನಿಕರಣ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕೇಂದ್ರ ಸರ್ಕಾರ ಈ ಕೂಡಲೇ ಬ್ಯಾಂಕ್‌ಗಳ ವಿಲೀನೀಕರಣ ಧೋರಣೆಯನ್ನು ಕೈಬಿಡಬೇಕು. ಜೊತೆಗೆ ಬ್ಯಾಂಕ್ ನೌಕರರಿಗೆ ಪೂರಕವಾಗುವಂತಹ ಕಾರ್ಯಗಳಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಗದಗನಲ್ಲಿರುವ ಎಲ್ಲ ಬ್ಯಾಂಕ್ ನೌಕರರು ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: