ಮೈಸೂರು

ಕಾಲೇಜು ವಿದ್ಯಾರ್ಥಿಗಳ ವೇದಿಕೆ ಉದ್ಘಾಟನೆ ಮತ್ತು ಓಣಂ ಹಬ್ಬದ ಆಚರಣೆ

ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ವತಿಯಿಂದ ಪ್ರೊ.ಚಿನ್ನಸ್ವಾಮಿ ಶೆಟ್ಟಿ ಸಭಾಂಗಣದಲ್ಲಿ ಸೆ.20 ರ ಬೆ. 10.30 ಕ್ಕೆ ಕಾಲೇಜು ವಿದ್ಯಾರ್ಥಿಗಳ ವೇದಿಕೆ 2016-17 ಉದ್ಘಾಟನೆ ಮತ್ತು ಓಣಂ ಹಬ್ಬದ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಶಾರದಾ ವಿಲಾಸ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಬಿ.ಎಸ್. ಪಾರ್ಥಸಾರಥಿ ಕಾರ‍್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಹನುಮಂತಾಚಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಪ್ರಾಂಶುಪಾಲ ಎಸ್. ಬಾಲಾಜಿ, ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನೇತ್ರಶಾಸ್ತ್ರ ವಿಭಾಗದ ಡಾ. ಪ್ರಕಾಶ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಶಾರದಾ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಹೆಚ್.ಕೆ. ಶ್ರೀನಾಥ್, ಶ್ರೀರಾಮ ಸೇವಾ ಮಂಡಳಿಯ ಖಜಾಂಚಿ ಕೆ.ಆರ್. ಗಣೇಶ್ ರಾವ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: