ಮೈಸೂರು

ಡಿ.29ರಂದು ಕುವೆಂಪು ಅವರ ಜನ್ಮದಿನ : ಗೀತಗಾಯನ

ಮೈಸೂರು,ಡಿ.27 : ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ 115ನೇ ಜನ್ಮ ದಿನಾಚರಣೆ ಹಾಗೂ ಕುವೆಂಪು ಗೀತಗಾಯನ ಕಾರ್ಯಕ್ರಮವನ್ನ ಡಿ.29ರ ಬೆಳಗ್ಗೆ 9ಕ್ಕೆ ವಿಶ್ವಮಾನವ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕುವೆಂಪು ಪತ್ರಿಮೆಗೆ ಮಾಲಾರ್ಪಣೆ ಮಾಡುವರು. ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಉದ್ಘಾಟಿಸುವರು. ಕುವೆಂಪು ಗೀತ-ಗಾಯನಕ್ಕೆ ಸಚಿವ ಸಾ.ರಾ.ಮಹೇಶ್ ಚಾಲನೆ ನೀಡುವರು. ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವಾರು ವಿದ್ವಾಂಸರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: