ಮೈಸೂರು

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ : ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಮಾಜವಾದಿ ಪಕ್ಷ ಇಂಗಿತ

ನಂಜನಗೂಡು ಹಾಗೂ ಗುಂಡ್ಲುಪೇಟೆಗಳಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ರಾಜ್ಯಾಧ್ಯಕ್ಷ ರೋಬಿಸ್ ಮ್ಯಾಥ್ಯೂಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಂಗಳವಾರ ಪತ್ರಕರ್ತರ ಭವನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೋಟು ಅಮಾನ್ಯಗೊಳಿಸಿ ಶ್ರೀಸಾಮಾನ್ಯರ ಜೀವನವನ್ನು ದುರ್ಬಲಗೊಳಿಸಿದ್ದಾರೆ. 50 ದಿನಗಳಲ್ಲಿ ದೇಶದಲ್ಲಿ ಮಹತ್ತರ  ಬದಲಾವಣೆಯಾಗುವುದು ಎಂದು ನಂಬಿಸಿ ವಂಚಿಸುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಕಪ್ಪು ಹಣ ತರುವುದಾಗಿ ಹೇಳಿದ್ದರೂ ಇಂದಿಗೂ ಸಾಧ್ಯವಾಗಿಲ್ಲ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಕೇವಲ ಭಾಷಣಗಳಲ್ಲಿಯೇ ಅಭಿವೃದ್ಧಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದರು.

ಬರ ಪರಿಹಾರದಲ್ಲಿಯೂ ರಾಜ್ಯ ರಾಜ್ಯಗಳ ನಡುವೆ ತಾರತಮ್ಯವೆಸಗಿ ಕೇಂದ್ರ ಸರ್ಕಾರ ರಾಜಕೀಯ ನಡೆಸಿದೆ. ಇದನ್ನು ಸಮಾಜವಾದಿ ಪಕ್ಷ ಬಲವಾಗಿ ಖಂಡಿಸುತ್ತದೆ. ಬರಗಾಲ, ಬೆಳೆ ನಷ್ಟದಿಂದ ರೈತರು ಸಂಕಷ್ಟದಲ್ಲಿದ್ದು ಅವರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

Leave a Reply

comments

Related Articles

error: