ಪ್ರಮುಖ ಸುದ್ದಿಮೈಸೂರು

ಬಿಜೆಪಿಯವರು ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಡಿ.30:-  ಶೀಘ್ರದಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ನ ನಿಗಮ ಮಂಡಳಿಗಳ ಅಧ್ಯಕ್ಷರುಗಳ  ನೇಮಕಾತಿ ನಡೆಯಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನೇಮಕಾತಿ ಬಗ್ಗೆ  ಕೆಲವೇ ದಿನಗಳಲ್ಲಿ ಅಂತಿಮ  ರೂಪುರೇಷೆ ಸಿಗಲಿದೆ. ಈಗಾಗಲೇ ಕಾಂಗ್ರೆಸ್ 20 ಜನರ ಹೆಸರು ವರಿಷ್ಟರಿಗೆ ತಿಳಿಸಲಾಗಿದೆ. ಉಳಿದ 10ಮಂದಿಗೆ ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಒಟ್ಟಿಗೆಯೇ 30 ಜನರ ನೇಮಕಾತಿ  ಮಾಡಲಾಗುವುದು ಎಂದರು. ರಾಜ್ಯಸರ್ಕಾರ ಇಂಗ್ಲಿಷ್ ಭಾಷಾ  ಶಾಲೆಗಳನ್ನು ತೆರೆಯುವುದರ  ಬಗ್ಗೆ ಮುಖ್ಯ ಮಂತ್ರಿಗಳೊಂದಿಗೆ  ಚರ್ಚಿಸಲಿದ್ದೇನೆ ಎಂದರು.  ಈಗಾಗಲೇ ಇಂಗ್ಲಿಷ್ ಭಾಷೆ ಶಾಲೆ ತೆರೆಯುವುದರ  ಬಗ್ಗೆ ವಿರೋಧ ವ್ಯಕ್ತವಾಗಿದೆ.  ಕನ್ನಡ ಭಾಷೆಗೆ ಹೆಚ್ಚು ಒತ್ತು ನೀಡುವ ದೃಷ್ಟಿಯಿಂದ ಸಾಹಿತ್ಯ ವಲಯದ ದಿಗ್ಗಜರು ವಿರೋಧಿಸಿದ್ದಾರೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮುನ್ನ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ದುರಾಸೆಯಿಂದ  ಹಿಂಬಾಗಿಲಿನಿಂದ ಮತ್ತೆ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಅವರು ಎಂದೂ ಸಹ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: