ಪ್ರಮುಖ ಸುದ್ದಿ

ಚಲನಚಿತ್ರ ರಂಗದ ಮೇರು ನಟ ಸಿ.ಎಚ್.ಲೋಕನಾಥ್ ಇನ್ನಿಲ್ಲ

ರಾಜ್ಯ(ಬೆಂಗಳೂರು)ಡಿ.31:- ರಂಗಭೂಮಿ ಮತ್ತು ಚಲನಚಿತ್ರ ರಂಗದ ಮೇರು ನಟ ಸಿ.ಎಚ್.ಲೋಕನಾಥ್ (90)ವಿಧಿವಶರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.

ಗೆಜ್ಜೆಪೂಜೆ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು ಶರಪಂಜರ, ಅಜರಾಮರ, ಮಿಂಚಿನ ಓಟ, ಭೂತಯ್ಯನ ಮಗ ಅಯ್ಯು, ಸಿಂಗಾಪುರದಲ್ಲಿ ರಾಜಾಕುಳ್ಳ, ಕಾಡು ಬೆಳದಿಂಗಳು ಸಂಸ್ಕಾರ ಸೇರಿದಂತೆ 650ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಪ್ರಾರಂಭದಲ್ಲಿ ‘ ರವಿ ಕಲಾವಿದರು ‘  1972 ರಿಂದ  ‘ ನಟರಂಗ’ದ ಪ್ರಮುಖ ನಟ, ‘ಸಮುದಾಯ’ ‘ಸೂತ್ರದಾರ’   ತಂಡಗಳ ಸುಮಾರು 1000 ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: