ಮೈಸೂರು

ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

ಮೈಸೂರು, ಜ.2:-ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ಹೊಸ ವರ್ಷಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ  ಟಿ. ರಂಗಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕೇಕ್ ಕಟ್ ಮಾಡಿ ಎಲ್ಲಾ ಮಕ್ಕಳಿಗೆ ಹಾಗೂ ಸಿಬ್ಬಂದಿಗಳಿಗೆ ಸಿಹಿ ಹಂಚಿ ಹೊಸ ವರ್ಷ ಎಲ್ಲರಿಗೂ ಸಕಲ ಸನ್ಮಂಗಳವನ್ನುಂಟು ಮಾಡಿ, ಎಲ್ಲ ಕಡೆ ಮಳೆ, ಬೆಳೆ ಸಮೃದ್ಧಿಯಾಗಿ ಆಗಲಿ ಎಂದು ಶುಭ ಹಾರೈಸಿದರು. ಮುಂಬರುವ ಪರೀಕ್ಷೆಗಳಿಗೆ ಸಿದ್ದರಾಗೋಣ. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹಿತನುಡಿಯನ್ನು ಹೇಳಿದರು.

ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಹಾಗೂ ಮಕ್ಕಳು ಸಂತಸದಿಂದ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. 9ನೇ ತರಗತಿಯ ಮಕ್ಕಳು ನಿರೂಪಣೆಯ ಜೊತೆಗೆ ಕೆಲ ಮನರಂಜನಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಆಡಳಿತಾಧಿಕಾರಿ ಕಾಂತಿನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ಝರೀನಾ ಬಾಬುಲ್‍ರವರು ಎಲ್ಲರಿಗೂ ಹೊಸ ವರ್ಷದ ಶುಭಾಶಯವನ್ನು ಕೋರಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: