ದೇಶಪ್ರಮುಖ ಸುದ್ದಿ

ಹೊಸ ವರ್ಷಕ್ಕೆ ಬಂಪರ್! ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

ನವದೆಹಲಿ (ಜ.2): ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ ಸಿಲಿಂಡರ್ ದರವನ್ನು ಕಡಿತಗೊಳಿಸಲಾಗಿದ್ದು, ಕೇಂದ್ರ ಸರ್ಕಾರ ಹೊಸ ವರ್ಷದ ಸಂದರ್ಭದಲ್ಲಿ ಎಲ್‍ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಒಂದೇ ತಿಂಗಳಲ್ಲಿ ಎರಡನೇ ಬಾರಿ ದರ ಇಳಿಕೆಯಾಗಿದೆ.

ಸಬ್ಸಿಡಿ ರಹಿತ ಸಿಲಿಂಡರ್‌ ದರ ರೂ. 120.50 ರಷ್ಟು ಕಡಿಮೆ ಮಾಡಲಾಗಿದೆ. ಸಬ್ಸಿಡಿ ಸಹಿತ ಎಲ್‌ಪಿಜಿ ಬೆಲೆ ರೂ. 5.91 ಕಡಿಮೆಯಾಗಿದೆ.

14.2 ಕೆ.ಜಿ ತೂಕದ ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ಸೋಮವಾರದಿಂದ ಜಾರಿ ಬಂದಿದ್ದು, ರೂ. 5.91 ಕಡಿಮೆಯಾಗಿದೆ. ಕಳೆದ ಬಾರಿ ರೂ. 6.52 ರಷ್ಟು ಬೆಲೆಯನ್ನು ತಗ್ಗಿಸಲಾಗಿತ್ತು ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೇಳಿದೆ. ಎಲ್ಪಿಜಿ ದರ ರೂ. 500.90 ರಿಂದ ರೂ. 494.99 ಕ್ಕೆ ಇಳಿದಿದೆ. ಕಳೆದ ತಿಂಗಳು 14.2 ಕೆಜಿ ತೂಕದ ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ರೂ. 507.42 ರಷ್ಟಿತ್ತು.

ಸಬ್ಸಿಡಿ ರಹಿತ ಸಿಲಿಂಡರ್‌ ಬೆಲೆಯಲ್ಲೂ ಇಳಿಕೆಯಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಲೆಗಳಿಗೆ ಅನುಗುಣವಾಗಿ ಸಿಲಿಂಡರ್‌ ಬೆಲೆ ಇಳಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರ್‌ ದರವನ್ನು ರೂ. 120.50 ರಂತೆ ಕಡಿಮೆ ಮಾಡಲಾಗಿದೆ. ಸಬ್ಸಿಡಿ ರಹಿತ ಸಿಲಿಂಡರ್ ದರ ಪ್ರತಿ ಸಿಲಿಂಡರ್ ಗೆ ಕಳೆದ ಬಾರಿ ರೂ. 133 ಇಳಿಕೆ ಮಾಡಲಾಗಿತ್ತು.

ದೇಶದ ಕುಟುಂಬಗಳು ಪ್ರತಿವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ವಿಪಡೆಯಬಹುದಾಗಿದೆ. ಇದಕ್ಕಿಂತ ಹೆಚ್ಚಿನ ಸಿಲಿಂಡರ್ ಗಳನ್ನು ಸಬ್ಸಿಡಿ ರಹಿತ ಖರೀದಿಸಬೇಕಾಗುತ್ತದೆ. ಸಬ್ಸಿಡಿ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. (ಎನ್.ಬಿ)

Leave a Reply

comments

Related Articles

error: