ಕರ್ನಾಟಕ

ಸಿದ್ದಗಂಗಾ ಮಠದ ಮಾಜಿ ಉತ್ತರಾಧಿಕಾರಿ ಗೌರಿಶಂಕರ ಸ್ವಾಮೀಜಿ ವಿಧಿವಶ

ತುಮಕೂರು: ಸಿದ್ದಗಂಗಾ ಮಠದ ಮಾಜಿ ಉತ್ತರಾಧಿಕಾರಿ ಗೌರಿಶಂಕರ ಸ್ವಾಮೀಜಿ(71) ಇಹಲೋಕ ತ್ಯಜಿಸಿದ್ದಾರೆ. ಪಾರ್ಶ್ವವಾಯು ಪೀಡಿತರಾಗಿದ್ದ ಸ್ವಾಮೀಜಿ ಕಳೆದ ಮೂರುವರೆ ತಿಂಗಳಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಶಿಷ್ಯರಾಗಿದ್ದ ಅವರು ಸಿದ್ದಗಂಗಾ ಮಠದ ಉತ್ತರಾಧಿಕಾರಿ ಸ್ಥಾನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ತುಮಕೂರಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

Leave a Reply

comments

Related Articles

error: