ಪ್ರಮುಖ ಸುದ್ದಿ

ಸಾಹಿತ್ಯ ಪ್ರವಾಸಕ್ಕೆ ಕುಶಾಲನಗರದಲ್ಲಿ ಚಾಲನೆ

ರಾಜ್ಯ(ಮಡಿಕೇರಿ) ಜ.3 :- ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾಗಿರುವ ಸಾಹಿತ್ಯ ಪ್ರವಾಸಕ್ಕೆ  ಉದ್ಯಮಿ ಹಾಗೂ ಕಸಾಪದ ಹಿರಿಯ ಸದಸ್ಯರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಕುಶಾಲನಗರದಲ್ಲಿ ಚಾಲನೆ ನೀಡಿದರು.

ಶ್ರೀಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಕಸಾಪ ಪ್ರಮುಖರು ಧಾರವಾಡದಲ್ಲಿ ನಡೆಯುವ 84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ 40 ಮಂದಿ ತೆರಳಿದರು. ಕೊಡಗು ಜಿಲ್ಲಾ ಕಸಾಪ, ಶಿವಮೊಗ್ಗ ಜಿಲ್ಲಾ ಕಸಾಪದ ಸಹಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯ ಹೇಮಾಂಗಣದಲ್ಲಿ ಆಯೋಜಿಸಲಾಗಿರುವ ಮಲೆನಾಡಿನ ಭಾವಸಂಗಮ ಎಂಬ ಕವಿಗೋಷ್ಠಿಯಲ್ಲಿ ಕೂಡ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಕಸಾಪದ ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್, ಕಾರ್ಯದರ್ಶಿ ಕೆ.ಎಸ್.ರಮೇಶ್, ಎನ್.ಎ.ಅಶ್ವಥ್ ಕುಮಾರ್, ಕೋಶಾಧ್ಯಕ್ಷ ಎಸ್.ಎ.ಮುರಳಿಧರ್, ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್, ಸೋಮವಾರಪೇಟೆ ತಾಲ್ಲೂಕಿನ ಅಧ್ಯಕ್ಷ ಎಸ್.ಡಿ.ವಿಜೇತ, ಕುಶಾಲನಗರ ಹೋಬಳಿ ಅಧ್ಯಕ್ಷ ರಂಗಸ್ವಾಮಿ, ಶನಿವಾರಸಂತೆ ಹೋಬಳಿ ಅಧ್ಯಕ್ಷ ಸಿ.ಎಂ.ಪುಟ್ಟಸ್ವಾಮಿ ಸೇರಿದಂತೆ ಜಿಲ್ಲೆಯ ಸಾಹಿತ್ಯ ಆಸಕ್ತರು ಪ್ರವಾಸದಲ್ಲಿ ಪಾಲ್ಗೊಂಡಿದ್ದಾರೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: