
ಪ್ರಮುಖ ಸುದ್ದಿಮೈಸೂರು
ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ : ಇಂದು ನ್ಯಾಯಾಲಯದ ಮುಂದೆ ನಾಲ್ವರು ಆರೋಪಿಗಳು
ಮೈಸೂರು,ಜ.3:- ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿ 17ಮಂದಿಯ ಸಾವಿಗೆ ಕಾರಣರಾಗಿ, ಅನೇಕರು ಅಸ್ವಸ್ಥರಾಗಿ ಆಸ್ಪತ್ರೆ ಸೇರುವಂತೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದು, ಇಂದು ನ್ಯಾಯಾಲಯಕ್ಕೆ ನಾಲ್ವರು ಆರೋಪಿಗಳು ಹಾಜರಾಗಲಿದ್ದಾರೆ ಎನ್ನಲಾಗಿದೆ. ನಾಲ್ವರು ಅರೋಪಿಗಳು ಕಳೆದ ಹದಿನಾಲ್ಕು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದರು. ಮೈಸೂರು ಜೈಲಿನಿಂದ ಕೊಳ್ಳೇಗಾಲ ನ್ಯಾಯಾಲಯಕ್ಕೆ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ್, ದೊಡ್ಡಯ್ಯ ನನ್ನು ಹಾಜರುಪಡಿಸಲಾಗುತ್ತಿದೆ.
ಇವರನ್ನು ಭದ್ರತಾ ದೃಷ್ಟಿಯಿಂದ ಮೈಸೂರು ಜೈಲಿನಲ್ಲಿರಿಸಲಾಗಿತ್ತು. ಬೆಳಿಗ್ಗೆ ಹನ್ನೊಂದು ಗಂಟೆಯ ಸುಮಾರಿಗೆ ಕೋರ್ಟ್ ಗೆ ಹಾಜರಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಂಗಳೂರು ಮೂಲದ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೈಸೂರು, ಚಾಮರಾಜನಗರ ಜಿಲ್ಲೆಗಳ ವಕೀಲರುಗಳು ಆರೋಪಿಗಳ ಪರ ವಕಾಲತ್ತು ವಹಿಸದಂತೆ ಬಾರ್ ಕೌನ್ಸಿಲ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವಕೀಲರು ಪ್ರಕರಣ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. (ಕೆ.ಎಸ್,ಎಸ್.ಎಚ್