ಪ್ರಮುಖ ಸುದ್ದಿ

ಸ್ಯಾಂಡಲ್ ವುಡ್ ನ ಕೆಲವು ತಾರೆಯರ ಮನೆಯ ಮೇಲೆ ತೆರಿಗೆ ಅಧಿಕಾರಿಗಳ ದಾಳಿ

ರಾಜ್ಯ(ಬೆಂಗಳೂರು)ಜ.3:- ಸ್ಯಾಂಡಲ್ ವುಡ್ ಕಲಾವಿದರಿಗೆ ಐಟಿ ಇಲಾಖೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದೆ.  ನಟ ಪುನೀತ್ ರಾಜ್ ಕುಮಾರ್, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ನಟ ಶಿವರಾಜುಕುಮಾರ್  ಸೇರಿದಂತೆ ಹಲವು ಕಲಾವಿದರ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ  ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ನಟ ಪುನೀತ್ ರಾಜ್ ಕುಮಾರ್ ಸದಾಶಿವನಗರ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಎರಡು ಖಾಸಗಿ ವಾಹನಗಳಲ್ಲಿ ಅಧಿಕಾರಿಗಳು ಬಂದು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ನಟ ಪುನೀತ್ ರಾಜ್ ಕುಮಾರ್ ನಿರ್ಮಾಪಕ ‘ರಾಕ್ ಲೈನ್ ವೆಂಕಟೇಶ್ ಮನೆ ಮೇಲೆ ಬೆಳ್ಳಂಬೆಳ್ಳಗೆ ಐಟಿ ದಾಳಿ ನಡೆದಿರುವುದರಿಂದ ಸಹಜವಾಗಿ ಸ್ಯಾಂಡಲ್ ವುಡ್ ನ ಕೆಲ ತಾರೆಗಳು ಸಹಜವಾಗಿ ಬೆಚ್ಚಿಬಿದ್ದಿದ್ದಾರೆ.

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ  ಜೆಪಿನಗರದ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕೆಜಿಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಂಗದೂರು, ಸಿ.ಆರ್ ಮನೋಹರ್  ಅವರ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದರು.

ಜತೆಗೆ ನಿರ್ಮಾಪಕ ಜಯಣ್ಣ ಅವರ ಮನೆ ಮೇಲೂ ಐಟಿ ರೇಡ್ ನಡೆದಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: