ಮೈಸೂರು

ರಾಜುಕಾಗೆಯನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಪ್ರತಿಭಟನೆ

ಬೆಳಗಾವಿಯಲ್ಲಿ ಬಿಜೆಪಿ ಶಾಸಕ ರಾಜುಕಾಗೆ ಕುಟುಂಬಿಕರು ಸಿಮೀಯ ಮಾದರಿಯಲ್ಲಿ ವಿವೇಕ್ ಶೆಟ್ಟಿ ಅವರನ್ನು ಹೊತ್ತೊಯ್ದು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದನ್ನು ಮೈಸೂರಿನ ನಾಗರಿಕ ಹಕ್ಕು ರಕ್ಷಣಾ ಸಮಿತಿ ಖಂಡಿಸಿದೆ.

ಮೈಸೂರಿನ ಜಿಲ್ಲಾ ನ್ಯಾಯಾಲಯದ ಎದುರು ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಗೂಂಡಾ ಸ್ವಭಾವದ ಕಾಗವಾಡ ಬಿಜೆಪಿ ಶಾಸಕ ರಾಜುಕಾಗೆಯನ್ನು ಬಿಜೆಪಿ ಶಾಸಕ ಸ್ಥಾನದಿಂದ ವಜಾಗೊಳಿಸಿ ಪ್ರಜಾಪ್ರಭುತ್ವದ ಹಾಗೂ ಕಾನೂನಿನ ಮೌಲ್ಯವನ್ನು ಉಳಿಸಬೇಕು ಎಂದು ಒತ್ತಾಯಿಸಿದರು. ವಿವೇಕಶೆಟ್ಟಿ ಗುಣಮುಖರಾಗುವವರೆಗೂ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ರಾಜ್ಯಾಧ್ಯಕ್ಷ ಗೋವಿಂದರಾಜು, ರಾಜ್ಯ ಉಪಾಧ್ಯಕ್ಷ ಜಿ.ತಾರ, ಜಿಲ್ಲಾಧ್ಯಕ್ಷ ರವಿಚಂದ್ರ, ಮೈಸೂರು ನಗರಾಧ್ಯಕ್ಷ ಮೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: