ಮೈಸೂರು

ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಲಭಿಸಲಿದೆ : ಮೇಯರ್ ಎಂ.ಜೆ.ರವಿಕುಮಾರ್

ಜೆ.ಎಸ್.ಎಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಶೌರ್ಯ 2017 ಕಾಲೇಜಿನ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.

ಮೈಸೂರು ಮಹಾನಗರಪಾಲಿಕೆಯ ಮೇಯರ್ ಎಂ.ಜೆ.ರವಿಕುಮಾರ್ ಕ್ರೀಡಾಕೂಟವನ್ನು ಕ್ರೀಡಾಜ್ಯೋತಿಯನ್ನು ಬೆಳಗಿಸಿ ಹಾಗೂ ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ಹಂತದಲ್ಲಿಯೇ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯ ಹೊಂದುವುದರ ಜೊತೆಗೆ ಉದ್ಯೋಗಕ್ಕೆ ಅವಕಾಶಗಳು ಲಭಿಸಲಿವೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಬೆಳೆಸಿಕೊಳ್ಳಬೇಕು ಎಂದರು. ಮೈಸೂರು ನಗರವನ್ನು ಮೂರನೇ ಬಾರಿ ಸ್ವಚ್ಛ ನಗರವಾಗಿ ಹ್ಯಾಟ್ರಿಕ್ ಸಾಧನೆ ಮಾಡುವಲ್ಲಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಸಹಕರಿಸಬೇಕೆಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಲಕ್ಷ್ಮೀಶ್ ಉಪಾಧ್ಯ ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾಕೂಟ ಸಂದರ್ಭದಲ್ಲಿ ಮಾತ್ರ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಸಾಲದು. ದೈಹಿಕ ಮತ್ತು ಮಾನಸಿಕ ಆರೋಗ್ಯ ಉಳಿಸಿ, ಬೆಳೆಸಿಕೊಳ್ಳುವ ದೃಷ್ಟಿಯಿಂದ ನಿರಂತರವಾಗಿ ಪ್ರತಿದಿನ ಒಂದರಿಂದ ಎರಡು ಗಂಟೆಗಳ ಕಾಲ ತಮಗೆ ಇಷ್ಟವಾದ ಕ್ರೀಡೆಯಲ್ಲಿ ಬಾಗವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಸಾದ್ ಹುಡೇದ್, ಕ್ರೀಡಾಕಾರ್ಯದರ್ಶಿ ಡಾ.ರಾಜೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: