ಮೈಸೂರು

ಅಂತರ ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಪರಮಹಂಸ ವಿದ್ಯಾನಿಕೇತನ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಮೈಸೂರು,ಜ.4;- ಮೈಸೂರಿನ ಹೆಬ್ಬಾಳ 2ನೇ ಹಂತದಲ್ಲಿರುವ ಶ್ರೀ ಪರಮಹಂಸ ವಿದ್ಯಾನಿಕೇತನ ಸಂಸ್ಥೆಯ ವಿದ್ಯಾರ್ಥಿಗಳು ಇತ್ತೀಚೆಗೆ ಮಂಡ್ಯ ಪ್ರಗತಿಪರ ಸೇವಾ ಸಂಸ್ಥೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪ್ರತಿಭಾ ವಿಜ್ಞಾನ ದಾವಣಗೆರೆಯವರು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಬಹುಮಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.

ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ಬಹುಮಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಶಾಲೆಯ ಮುಖ್ಯೋಪಾಧ್ಯಾಯಿನಿ ನೀತಿ ಕುಮಾರಿ, ಖಜಾಂಚಿ ತೇಜಾವತಿ ಟಿ.ಎನ್, ಕಾರ್ಯದರ್ಶಿ ಸುಮಾ ರಾಜಶೇಖರ್, ಚಿತ್ರಕಲಾ ಶಿಕ್ಷಕ ನಾಗರಾಜ ಎಂ ಶ್ಲಾಘಿಸಿದ್ದಾರಲ್ಲದೇ, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: