ಕರ್ನಾಟಕಪ್ರಮುಖ ಸುದ್ದಿ

ಫೆ.8ರಂದು ರಾಜ್ಯ ಬಜೆಟ್, ಸಂಪೂರ್ಣ ಸಾಲಮನ್ನಾ: ಸಿಎಂ ಕುಮಾರಸ್ವಾಮಿ ಘೋಷಣೆ

ಬೆಂಗಳೂರು (ಜ.4): ಮುಂದಿನ ತಿಂಗಳು ಅಂದರೆ ಫೆಬ್ರವರಿ 8ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ರೈತರ ಸಾಲಮನ್ನಾ ಕುರಿತಂತೆ ಪ್ರತಿಪಕ್ಷಗಳು ಮಾಡುತ್ತಿರುವ ಎಲ್ಲಾ ಟೀಕೆಗೆ ಉತ್ತರ ಕೊಡುವಂತೆ ಫೆ.8ರಂದು ಬಜೆಟ್‍ನಲ್ಲಿ ಬ್ಯಾಂಕುಗಳಿಗೆ ನೀಡಬೇಕಾದ ಸಾಲದ ಮೊತ್ತವನ್ನು ಒಂದೇ ಕಂತಿನಲ್ಲಿ ಪಾವತಿಸುವುದಾಗಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದ ಆವರಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತಣಾಡಿದ ಅವರು ಫೆ.8ರಂದು ಬಜೆಟ್ ಮಂಡನೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ. ಬಜೆಟ್ ವೇಳೆ ಸಾಲಮನ್ನಾ ಯೋಜನೆಯ ಪೂರ್ಣಮೊತ್ತ 46 ಸಾವಿರ ಕೋಟಿ ರೂವನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಚುಕ್ತಾ ಮಾಡುವ ಬಗ್ಗೆ ಪ್ರಕಟಿಸಲಾಗುವುದು, ರೈತರಲ್ಲಿ ಅವಿಶ್ವಾಸ ಮೂಡಿಸುವ ವಿಪಕ್ಷಗಳ ಹುನ್ನಾರಕ್ಕೆ ಯಾವುದೇ ಆಸ್ಪದ ನೀಡಬಾರದು ಎಂದು ಹೇಳಿದರು.

ಮುಂದಿನ ಬಜೆಟ್‌ನಲ್ಲಿ ಹಿರಿಯ ನಾಗರಿಕರ ವೃದ್ಧಾಪ್ಯ ವೇತನವನ್ನು ಒಂದು ಸಾವಿರ ರೂ.ನಿಂದ ಎರಡು ಸಾವಿರ ರೂಗೆ ಹೆಚ್ಚಳ ಮಾಡುವ ಇಂಗಿತವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದರು.

ಎಸ್.ಎಂ.ಕೃಷ್ಣಗೆ ಹೇಳಿಕೆ ಬಗ್ಗೆ ಆಕ್ಷೇಪ

ರೈತರ ಸಾಲಮನ್ನಾ ಯೋಜನೆ ಬಗ್ಗೆ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು ವೈಜ್ಞಾನಿಕವಾಗಿ ಮಾಡಿಲ್ಲ ಎಂದು ಆರೋಪಿದ್ದಾರೆ. ಈಗಲಾದರೂ ಅವರಿಗೆ ರೈತರ ಬಗ್ಗೆ ಕಾಳಜಿ ಬಂದಿದ್ದರೆ ಗೌರವ ಸಲ್ಲಿಸುತ್ತೇನೆ. ಬಹುಶಃ ಅವರಿಗೆ ಸಾಲಮನ್ನಾದ ಬಗ್ಗೆ ಸರಿಯಾದ ಮಾಹಿತಿ ಇಲ್ಲದಿರಬಹುದು. ಅವರಿಗೆ ಸರ್ಕಾರ ಯಾವ ರೀತಿಯಲ್ಲಿ ವೈಜ್ಞಾನಿಕವಾಗಿ ಸಾಲಮನ್ನಾ ಮಾಡಲಾಗುತ್ತಿದೆ ಎಂಬ ಸಮಗ್ರ ಮಾಹಿತಿಯುಳ್ಳ ಪ್ರತಿಯನ್ನು ಕಳುಹಿಸಿಕೊಡಲಾಗುವುದು’ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಹೆಸರು ಪ್ರಸ್ತಾಪಿಸಿದರೆ ಪರೋಕ್ಷವಾಗಿ ಆಕ್ಷೇಪಿಸಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೊಂದಿಗೆ ಜನತೆ ಕೈಜೋಡಿಸಬೇಕು. 10-12 ಜೆಡಿಎಸ್‌ ನಾಯಕರನ್ನು ಲೋಕಸಭೆಗೆ ಕಳುಹಿಸಬೇಕು. ಉತ್ತರ ಕರ್ನಾಟಕದ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಬೇಕು. ಇಲ್ಲದಿದ್ದರೆ ಯೋಜನೆ ಸಾಕಾರವಾಗುವುದಿಲ್ಲ. ಈ ಸತ್ಯವನ್ನು ಜನತೆ ತಿಳಿದುಕೊಳ್ಳಬೇಕು. ಇದನ್ನು ಜನರು ತಿಳಿದುಕೊಳ್ಳದಿದ್ದರೆ ಬಿಜೆಪಿಯಿಂದ ಟೋಪಿ ಹಾಕಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಂದಿನ ಬಜೆಟ್‌ನಲ್ಲಿ ಹಿರಿಯ ನಾಗರಿಕರ ವೃದ್ಧಾಪ್ಯ ವೇತನವನ್ನು ಒಂದು ಸಾವಿರ ರು.ನಿಂದ ಎರಡು ಸಾವಿರ ರು.ಗೆ ಹೆಚ್ಚಳ ಮಾಡುವ ಇಂಗಿತ ಇದೆ. ಅಲ್ಲದೇ, ವಿಧವಾ ವೇತನ ಹೆಚ್ಚಳ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಕಟಿಸಲಾಗುವುದು ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇತ್ತೀಚೆಗೆ ಬಿಜೆಪಿ ಮುಖಂಡರೊಬ್ಬರು ಸಹ ಸರ್ಕಾರ ಪತನವಾಗುವ ಬಗ್ಗೆ ಹೇಳಿಕೆ ನೀಡಿದ್ದರು. ಸರ್ಕಾರ ಪತನಗೊಳಿಸುವ ಪ್ರಯತ್ನ ಮಾಡಲಿ ಎಂಬ ಕಾರಣಕ್ಕಾಗಿ ವಿದೇಶ ಪ್ರವಾಸ ಕೈಗೊಂಡಿದ್ದೆ. ನನ್ನಿಂದ ಸಮಸ್ಯೆಯಾಗಬಾರದು ಎಂದು ಪ್ಯಾರಿಸ್‌ಗೆ ಪ್ರಯಾಣ ಬೆಳೆಸಿದ್ದೆ. ಆದರೂ ಏನೂ ಮಾಡಲಿಲ್ಲ ಎಂದು ಮಾಜಿ ಸಚಿವ ಉಮೇಶ್‌ ಕತ್ತಿ ಉದ್ದೇಶಿಸಿ ಕುಮಾರಸ್ವಾಮಿ ವ್ಯಂಗ್ಯವಾಡಿದರು. (ಎನ್.ಬಿ)

Leave a Reply

comments

Related Articles

error: