ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ : ಸನ್ಮಾನ ನಾಳೆ

ಮೈಸೂರು,ಜ.4 : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಾಗೂ ರಾಜ್ಯ ಮಹಿಳಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಅವರ ಅಭಿನಂದನಾ ಸಮಾರಂಭವನ್ನು ನಾಳೆ (5) ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಸ್ಥಾಪನಾ ದಿನಾಚರಣೆ ಹಾಗೂ ಧ್ವಜಾರೋಹಣವನ್ನು ನೆರವೇರಿಸಲಾಗುವುದು, ನಂತರ ಕಾರ್ಯಕಾರಿಣಿ ಸಭೆ.

ಮಧ್ಯಾಹ್ನ 12 ಗಂಟೆಗೆ ಡಾ.ಪುಷ್ಪ ಅಮರ್ ನಾಥ್ ಅವರ ಅಭಿನಂದನಾ ಸಮಾರಂಭವನ್ನು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸೇವಾದಳದಿಂದ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಎಂ.ಗೀತಾ ಪತ್ರಿಕಾ ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: