ಕರ್ನಾಟಕಮನರಂಜನೆ

ಸಹನಟಿ ಸಾವು ಪ್ರಕರಣ: 7 ಮಂದಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಚಿತ್ರನಟ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ‘ವಿಐಪಿ’ ಸಿನಿಮಾದ ಚಿತ್ರೀಕರಣದ ವೇಳೆ ಲಿಫ್ಟ್ ಗುಂಡಿಗೆ ಬಿದ್ದು ಸಹ ಕಲಾವಿದೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಾನುಕುಂಟೆ ಪೊಲೀಸರು ನಿರ್ದೇಶಕ ಸೇರಿ 7 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಿರ್ದೇಶಕ ನಂದ ಕಿಶೋರ್ ಸೇರಿದಂತೆ ನರಸಿಂಹ, ಹೆಗಡೆ, ಶೇಖರ್, ಗೌರಮ್ಮ ಹಾಗೂ ಪ್ರೆಸ್ಟೀಜ್ ಬಿಲ್ಡರ್ಸ್ ಮಾಲೀಕರು ಮತ್ತು ಗುತ್ತಿಗೆದಾರರ ವಿರುದ್ಧ ದೂರು ದಾಖಲಿಸಲಾಗಿದೆ. ಎಲ್ಲ ಆರೋಪಿಗಳು ತಲೆಮರೆಸಿಕೊಂಡಿದ್ದು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪದ್ಮಾವತಿ ಪ್ರೆಸ್ಟೀಜ್ ಗ್ರೂಪ್ ನಿರ್ಮಿಸುತ್ತಿರುವ ಅಪಾರ್ಟ್ ಮೆಂಟ್ ನ ಲಿಫ್ಟ್ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದರು.

Leave a Reply

comments

Related Articles

error: