ಮೈಸೂರು

ಆರೋಗ್ಯ ಮೈಸೂರು ನಾಳೆ

ಮೈಸೂರು,ಜ.5 : ಆರೋಗ್ಯ ಮೈಸೂರು ತಪಾಸಣಾ ಕಾರ್ಯಕ್ರಮವನ್ನು ವಿದ್ಯಾರಣ್ಯಪುರಂನ ಒಕ್ಕಲಿಗರ ಸಮುದಾಯ ಭವನದಲ್ಲಿ ಜ.6ರ ಬೆಳಗ್ಗೆ 7 ರಿಂದ 2ರವರೆಗೆ ಏರ್ಪಡಿಸಲಾಗಿದೆ.

ಬೆಳಗಿನ 10 ಗಂಟೆಗೆ ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಬಿ.ಎಸ್.ಶ್ರೀನಾಥ್ ಉದ್ಘಾಟಿಸುವರು. ಬಿಜೆಪಿ ಮುಖಂಡರಾದ ಹೆಚ್.ವಿ.ರಾಜೀವ್, ಉದ್ಯಮಿ ಷರೀಫ್, ಮಹಾನಗರ ಪಾಲಿಕೆ ಸದಸ್ಯರಾದ ಮಾ.ವಿ.ರಾಮಪ್ರಸಾದ್, ಶೋಭಾ ಸುನಿಲ್, ಪುಟ್ಟನಿಂಗಮ್ಮ ಇರಲಿದ್ದಾರೆ. ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದರೊಂದಿಗೆ ಆರೋಗ್ಯ ಜಾಗೃತಿ ಸಭೆಯನ್ನು ನಡೆಸಲಾಗುತ್ತಿದೆ ಎಂದುಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: