ಪ್ರಮುಖ ಸುದ್ದಿಮೈಸೂರು

ಮೈಸೂರಿನ ಕನ್ನಡಪರ ಹೋರಾಟಗಾರರಿಂದ ಸಾಹಿತ್ಯ ಸಮ್ಮೇಳನದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ಸನ್ಮಾನ

ರಾಜ್ಯ(ಧಾರವಾಡ)ಜ.7:- 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೈಸೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ. ‌ಹೆಚ್ .ಸಿ.ಮಹಾದೇವಪ್ಪ ಅವರನ್ನು ಮೈಸೂರಿನ ಕನ್ನಡ ಪರ ಹೋರಾಟಗಾರರು ಸನ್ಮಾನಿಸಿದರು.

84ನೇ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಕೊನೆಯ ದಿನವಾದ ನಿನ್ನೆ ಅಂಬಿಕಾತನಯದತ್ತ ಪ್ರಧಾನ ವೇದಿಕೆಯಲ್ಲಿ ಕನ್ನಡ ಹೋರಾಟಗಾರರಿಂದ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ. ‌ಹೆಚ್ .ಸಿ.ಮಹಾದೇವಪ್ಪ ನವರನ್ನು ಸನ್ಮಾನಿಸಲಾಯಿತು. ಈ ಸನ್ಮಾನವನ್ನು  ಧಾರವಾಡದಲ್ಲಿ ನಡೆಯುತ್ತಿರುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ಕಂಬಾರ್ ಅವರು ನೆರವೇರಿಸಿಕೊಟ್ಟರು.  ಈ ಸಂದರ್ಭದಲ್ಲಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಅರವಿಂದ್ ಶರ್ಮ , ಬೆಂಗಳೂರು ಕ.ಸಾ.ಪ ನಗರಾಧ್ಯಕ್ಷರಾದ ಮಾಯಣ್ಣ , ಡೈರಿ ವೆಂಕಟೇಶ್ , ಶಿವಶಂಕರ್ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: