ಕರ್ನಾಟಕಪ್ರಮುಖ ಸುದ್ದಿ

ಭಾರತ್ ಬಂದ್: ಜ.8-9 ರಂದು ರಾಜ್ಯದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು (ಜ.7): ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಹಾಗೂ 9ರ ಭಾರತ್ ಬಂದ್‌ಗೆ ಕರೆ ನೀಡಿದ್ದು, ಮಕ್ಕಳ ಭದ್ರತೆ ಮತ್ತು ರಕ್ಷಣೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶಶಿಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಇನ್ನು ಸರಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಬಗ್ಗೆ ಅಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವುದಕ್ಕೆ ಅಧಿಕಾರ ನೀಡಲಾಗಿದೆ. ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಒಟ್ಟು ಹನ್ನೇರಡು ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ.

ಎಐಟಿಸಿ, ಐಎನ್‍ಟಿಯುಸಿ, ಸಿಐಟಿಯು ಸೇರಿದಂತೆ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆಕೊಟ್ಟ ಬಂದ್‍ಗೆ ದೋಸ್ತಿ ಸರ್ಕಾರ ಪರೋಕ್ಷ ಬೆಂಬಲ ನೀಡಿದಂತೆ ಕಾಣುತ್ತಿದೆ. ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‍ಗಳು ಸ್ತಬ್ಧವಾಗಲಿವೆ. (ಎನ್.ಬಿ)

Leave a Reply

comments

Related Articles

error: