ಮೈಸೂರು

ಜಿ.ಪಂ ನಲ್ಲಿ ವಿವಿಧ ಇಲಾಖಾಧಿಕಾರಿಗಳೊಂದಿಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಸಭೆ

ಮೈಸೂರು,ಜ.8:- ಮೈಸೂರು ಜಿಲ್ಲಾ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ವಿವಿಧ ಇಲಾಖಾಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ಸಂದರ್ಭ ಅವರು ಎಲ್ಲ ಇಲಾಖೆಗಳಲ್ಲಿಯೂ ಯಾವ ರೀತಿ ಪಾರದರ್ಶಕ ಆಡಳಿತ ನಡೆಯುತ್ತಿದೆ ಎನ್ನುವ ಕುರಿತು ಮಾಹಿತಿ ಪಡೆದರು. ಎಲ್ಲ ಇಲಾಖೆಗಳಲ್ಲಿಯೂ ಕಡತಗಳ ವಿಲೇವಾರಿ ಯಾವ ರೀತಿ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ನ್ಯಾಯಮೂರ್ತಿಗಳು ಅಧಿಕಾರಿಗಳ ಬಳಿ ಯಾವ ರೀತಿ ಕ್ರಮಗಳನ್ನು ಕೈಗೊಂಡಿದ್ದೀರಿ, ಎಷ್ಟು ದೂರುಗಳು ಬಂದಿವೆ. ದೂರುಗಳು ಯಾವ ರೀತಿಯಲ್ಲಿವೆ ಎನ್ನುವ ಕುರಿತು ಮಾಹಿತಿ ಪಡೆದರು.

ಈ ಸಂದರ್ಭ ಎಡಿಜಿಪಿ ಲೋಕಾಯುಕ್ತ ಎ.ಎಸ್.ಮೂರ್ತಿ, ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜ್ಯೋತಿ, ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: