ಪ್ರಮುಖ ಸುದ್ದಿ

ಕೃಷ್ಣರಾಜಪೇಟೆ ತಾಲೂಕಿನಲ್ಲಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಸಂಪೂರ್ಣ ವಿಫಲ

ರಾಜ್ಯ(ಮಂಡ್ಯ)ಜ.8:- ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನಲ್ಲಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಸಂಪೂರ್ಣ ವಿಫಲವಾಯಿತು.

ರಾಜ್ಯ ರಸ್ತೆ ಸಾರಿಗೆ ಬಸ್ಸುಗಳು ಎಂದಿನಂತೆ ಸಂಚರಿಸಿದರೆ ಅಂಗಡಿ ಮುಂಗಟ್ಟುಗಳು ಹಾಗೂ ಸರ್ಕಾರಿ ಕಛೇರಿಗಳು ಬಾಗಿಲು ತೆರೆದು ಕೆಲಸ ಮಾಡಿದವು. ಬಿಸಿಯೂಟ ಅಕ್ಷರದಾಸೋಹ, ಅಂಗನವಾಡಿ, ಆಶಾ ಮತ್ತು ಗ್ರಾಮ ಪಂಚಾಯತ್ ನೌಕರರು ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಪಟ್ಟಣದ ಮುಖ್ಯರಸ್ತೆಯಲ್ಲಿ ಸಂಚರಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಮಿನಿ ವಿಧಾನಸೌಧದ ಬಳಿ ತೆರಳಿದ ಪ್ರತಿಭಟನಾಕಾರರು ಪ್ರಭಾರ ತಹಶೀಲ್ದಾರ್ ಮಹದೇವೇಗೌಡ ಅವರಿಗೆ ಮನವಿ ಸಲ್ಲಿಸಿ ತಮ್ಮ ವಿವಿಧ 13 ಬೇಡಿಕೆಗಳನ್ನು ಈಡೇರಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ತಮ್ಮ ಸೇವೆಯನ್ನು ಖಾಯಂ ಮಾಡಬೇಕು. ಡಾ.ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಮಾಸಿಕ 6 ಸಾವಿರ ರೂ ನಿವೃತ್ತಿ ವೇತನ ನೀಡಬೇಕು ಎಂದು ಆಗ್ರಹಿಸಿದರು. ತಾಲೂಕು ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ಮೋದೂರು ನಾಗರಾಜು, ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಸಾವಿತ್ರಮ್ಮ, ಅಕ್ಷರದಾಸೋಹ ಬಿಸಿಯೂಟ ತಯಾರಕರ ಸಂಘದ ಅಧ್ಯಕ್ಷೆ ಭಾಗ್ಯಮ್ಮ, ಸಿಐಟಿಯು ಸಂಘಟನೆಯ ಎಂ.ಕೆ.ಕುಮಾರ್, ಪ್ರಧಾನ ಕಾರ್ಯದರ್ಶಿ ನಾಗೇಶ್ ಸೇರಿದಂತೆ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: