ಮೈಸೂರು

ಸಂಕ್ರಮಣ-2017 ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ಮೈಸೂರಿನ ವಿಜಯನಗರದ ಕಲಾನಿಕೇತನ ಆರ್ಟ್ ಗ್ಯಾಲರಿಯಲ್ಲಿ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ ವತಿಯಿಂದ ಆಯೋಜಿಸಿದ್ದ ಸಂಕ್ರಮಣ-2017 ಚಿತ್ರಕಲಾ ಪ್ರದರ್ಶನಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮೈಸೂರಿನಲ್ಲಿ ಕಲಾಸಕ್ತರ ಸಂಖ್ಯೆ ಹೆಚ್ಚಿದೆ. ಅದು ಕಲೆಯ ಬೆಳವಣಿಗೆಗೆ ಪೂರಕವಾಗಿದೆ. ಕಲಾವಿದನಿಗೆ ಸಮಾಜವನ್ನು ಪರಿವರ್ತಿಸುವ ಶಕ್ತಿ ಇದೆ. ಅದರಿಂದ  ಸಮಾಜಕ್ಕೆ ಒಳಿತಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಪ್ಪ, ಪ್ರಾಂಶುಪಾಲ ಕೆ.ಸಿ.ಮಹದೇವಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: