ಮೈಸೂರು

ಬಾಲಕಿ ಮೇಲೆ ಅತ್ಯಾಚಾರ : ಹತ್ತು ವರ್ಷ ಕಠಿಣ ಜೈಲು ಶಿಕ್ಷೆ

ಮೈಸೂರು,ಜ.9:-ಎಂಟು ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಯೋರ್ವನಿಗೆ ಇಲ್ಲಿನ ಪೋಕ್ಸೋ ವಿಶೇಷ ನ್ಯಾಯಾಲಯವು ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಐದು ಸಾವಿರ ರೂ.ದಂಡ ವಿಧಿಸಿದೆ.

ಮೈಸೂರು ತಾಲೂಕಿನ ಗ್ರಾಮವೊಂದರಲ್ಲಿ 2016ರ ಜನವರಿ 1ರಂದು ಬಾಲಕಿಯು ತಿಪ್ಪೆಗೆ ಕಸ ಸುರಿಯಲು ಹೋದ ವೇಳೆ ಪಕ್ಕದ ಹಿತ್ತಲಿಗೆ ಎಳೆದುಕೊಂಡು ಹೋದ ವ್ಯಕ್ತಿ ಅತ್ಯಾಚಾರವೆಸಗಿದ್ದ. ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೆಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಆರೋಪಿಗೆ ಹತ್ತು ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು ಐದು ಸಾವಿರ ರೂ.ದಂಡ ವಿಧಿಸಿದ್ದಾರೆ.  ಸಂತ್ರಸ್ತ ಪರಿಹಾರ ನಿಧಿಯಿಂದ ಬಾಲಕಿಗೆ ರೂ.3ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: