ಕ್ರೀಡೆಮೈಸೂರು

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ : ದ್ವಿತೀಯ ಸ್ಥಾನ ಪಡೆದ ಜೆ ಎಸ್ ಎಸ್ ಪ.ಪೂ ಕಾಲೇಜ್

ಮೈಸೂರು,ಜ.9:- ನಗರದ ಮರಿಮಲ್ಲಪ್ಪ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ  ಖೋ ಖೋ ಪಂದ್ಯಾವಳಿಯಲ್ಲಿ ಬಿ.ಎನ್.ರಸ್ತೆಯಲ್ಲಿರುವ ಜೆ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದ್ದಾರೆ.

ಪಂದ್ಯಾವಳಿಯಯಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳನ್ನು ಜೆ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್ ಸೋಮಶೇಖರ್, ಮುಖ್ಯ ಕಾರ್ಯನಿರ್ವಾಹಕರಾದ ಪ್ರೊ.ಬಿ.ವಿ.ಸಾಂಬಶಿವಯ್ಯ, ಯು.ಜಿ.ಸಿ. ಜಂಟಿ ಕಾರ್ಯದರ್ಶಿ ಮತ್ತು ಸ್ಥಳೀಯ ಮುಖ್ಯಸ್ಥರಾದ ಡಾ.ಜಿ.ಶ್ರೀನಿವಾಸ್, ದೈಹಿಕ ಶಿಕ್ಷಣ ನಿರ್ದೇಶಕರಾದ ಟಿ. ಅರವಿಂದ್ ಅಭಿನಂದಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: