ಮೈಸೂರು

ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ

ಮೈಸೂರು,ಜ.9:- ಕೆ.ಆರ್.ಆಸ್ಪತ್ರೆಗೆ ಇಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಭೇಟಿ ನೀಡಿದರು.

ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಎಂ.ಶ್ರೀನಿವಾಸ್ ಜೊತೆ ಚರ್ಚೆ ನಡೆಸಿದ ನ್ಯಾಯಮೂರ್ತಿಗಳು ಅಧೀಕ್ಷಕರ ಜೊತೆ ಚರ್ಚೆ ‌ಬಳಿಕ ಕೆ.ಆರ್.ಆಸ್ಪತ್ರೆಯಲ್ಲಿನ ವಾರ್ಡ್ ಗಳ ವೀಕ್ಷಣೆ ನಡೆಸಿದರು. ವಾರ್ಡ್ ಗಳಿಗೆ ಖುದ್ದು ತೆರಳಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿಗಳು ಪರಿಶೀಲನೆ ವೇಳೆ ವೈದ್ಯರ ಜೊತೆ ಚರ್ಚೆ ನಡೆಸಿದರು.

ಈ ಸಂದರ್ಭ ಲೋಕಾಯುಕ್ತ ನ್ಯಾಯಮೂರ್ತಿಗಳ ಜೊತೆ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್,ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: